alex Certify BIG NEWS: ಅಧಿವೇಶನಕ್ಕೆ ಸಚಿವರು – ಶಾಸಕರ ಕಡ್ಡಾಯ ಹಾಜರಾತಿಗೆ ಸ್ಪೀಕರ್ ಖಡಕ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಧಿವೇಶನಕ್ಕೆ ಸಚಿವರು – ಶಾಸಕರ ಕಡ್ಡಾಯ ಹಾಜರಾತಿಗೆ ಸ್ಪೀಕರ್ ಖಡಕ್ ಸೂಚನೆ

ಬೆಳಗಾವಿ: ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 19 ರಿಂದ 29 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದ್ದು, ಅಧಿವೇಶನದಲ್ಲಿ ಯಾರೊಬ್ಬ ಶಾಸಕ-ಸಚಿವರೂ ಗೈರಾಗುವಂತಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಾಕೀತು ಮಾಡಿದ್ದಾರೆ.

ಬೆಳಗಾವಿ ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್ ಕಾಗೇರಿ, ಕಲಾಪಗಳಲ್ಲಿ ಸಚಿವರು ಮತ್ತು ಶಾಸಕರು ಕಡ್ಡಾಯವಾಗಿ ಹಾಜರಾಗಿರಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಅನುಮತಿ ಮೇರೆಗೆ ಹಾಜರಾತಿಯಿಂದ ವಿನಾಯಿತಿ ಪಡೆಯಬಹುದು ಎಂದರು.

ಜನರ ಅಶೋತ್ತರಗಳನ್ನು ಈಡೇರಿಸುವ ಸಂಸದೀಯ ಮಾರ್ಗ ಅಧಿವೇಶನದ ಉದ್ದೇಶ. ಜನರ ಭಾವನೆಗಳಿಗೆ ಸ್ಪಂದಿಸಿ ಎಲ್ಲರೂ ಸದನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಹೇಳಿದರು.

ಈ ಬಾರಿ ಮಹತ್ವದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದೆ. ಇದು ಬೆಳಗಾವಿಯಲ್ಲಿ ನಡೆಯುತ್ತಿರುವ 10ನೇ ಅಧಿವೇಶನವಾಗಿದೆ. ಯಾವುದೇ ಕೋವಿಡ್ ನಿರ್ಬಂಧಗಳು ಇರುವುದಿಲ್ಲ. 6 ಮಸೂದೆಗಳನ್ನು ಈ ಅಧಿವೇಶನದಲ್ಲಿ ಜಾರಿಗೆ ತರಲಾಗುತ್ತಿದೆ ಎಂದರು.

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಅಧಿವೇಶನದಲ್ಲಿ ಆದ್ಯತೆ ನೀಡಲಾಗುವುದು. ವಿಶೇಷವಾಗಿ ಈ ಬಾರಿಯ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗುವುದು. ಆಯ್ಕೆ ಸಮಿತಿ ನೀಡುವ ವರದಿ ಆಧರಿಸಿ ಅತ್ಯುತ್ತಮ ಶಾಸಕರ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Chytré triky pro vaši kuchyni, zahradu a život: objevte naše nejlepší tipy a triky pro vaši každodenní rutinu. Uvařte si lahodné pokrmy a pěstujte si zeleninu jako profesionálové. Naše užitečné články vám pomohou vytvořit skvělý životní styl. Hledání jelenů v lese: náročná hádanka Monastery Hut" сухари: рецепт вкусного Potřeba najít kočku mezi Recept: Chutná a rychlá Jak vybrat Složitá hádanka pro géniusy: jen ti nejpozornější Čokoláda: Vybrat mezi černou a mléčnou pro zdraví Skutečný detektiv odhalil rybu za 7 Zdravotní kouzlo: Superpotravina bohatá na vitamíny pro ochranu před nemocemi Výběr čerstvých ryb Tři rozdíly Jak snížit stres: 9 potravin, Загадка с переворотом: немногие заметят ошибку Získat nejnovější lifestylové tipy, kuchařské triky a užitečné články o zahradničení na našem webu! Najdete zde spoustu inspirace pro vylepšení svého každodenního života a získání nových dovedností. Buďte součástí naší komunity a objevujte společně s námi radost z jednoduchých, ale efektivních triků pro pohodlnější a zdravější život!