ಹುಬ್ಬಳ್ಳಿ: ನಾಳೆಯಿಂದ ಕುಂದಾನಗರಿ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, 2 ವರ್ಷಗಳ ಬಳಿಕ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ಈ ಬಾರಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯಾಗಬೇಕು. ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರವಾಗಿ ಚರ್ಚೆಗಳು ನಡೆಯಲಿ ಎಂದರು.
ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್: ರತನ್ ಟಾಟಾ ಬೆಂಬಲಿತ ಸ್ಟಾರ್ಟ್ ಅಪ್ ನಿಂದ ಮನೆ ಬಾಗಿಲಿಗೆ ಇಂಧನ
ಯಾವುದೇ ಧರ್ಮದವರು ಆತಂಕ ಪಡುವ ಅಗತ್ಯವಿಲ್ಲ. ಬಡತನ, ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಳ್ಳಬಾರದು. ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ. ಹೀಗಾಗಿ ರಾಜ್ಯದಲ್ಲಿ ಕಾನೂನು ರಚಿಸಬೇಕು ಎಂದು ಬಯಸುತ್ತಿದ್ದಾರೆ. ಕಾನೂನು ಇಲಾಖೆ ಜೊತೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮತಾಂತರದಿಂದ ಬಡ ಕುಟುಂಬಗಳಿಗೆ ತೊಂದರೆಯಾಗುತ್ತೆ. ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಈ ನಿಟ್ಟಿನಲ್ಲಿ ಕಾನೂನು ಜಾರಿಯಾಗಬೇಕು ಎಂಬುದು ಹಲವರ ಒತ್ತಾಯ ಎಂದು ಹೇಳಿದರು.