alex Certify BIG NEWS: ಅಧಿವೇಶನದ ಸಂದರ್ಭದಲ್ಲೂ ಸಂಸದರ ಬಂಧನಕ್ಕೆ ಇಲ್ಲ ಅಡ್ಡಿ; ರಾಜ್ಯಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಧಿವೇಶನದ ಸಂದರ್ಭದಲ್ಲೂ ಸಂಸದರ ಬಂಧನಕ್ಕೆ ಇಲ್ಲ ಅಡ್ಡಿ; ರಾಜ್ಯಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು ಸ್ಪಷ್ಟನೆ

ಪ್ರಸ್ತುತ ಲೋಕಸಭಾ ಅಧಿವೇಶನ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಸಂಸದರೂ ಆಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರುಗಳ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ನಡೆಸಿತ್ತು.

ಅಲ್ಲದೆ ಭೂ ಹಗರಣದಲ್ಲಿ ಶಿವಸೇನೆ ಸಂಸದ ಸಂಜಯ್ ರಾವತ್ ಅವರನ್ನು ಬಂಧಿಸಲಾಗಿದ್ದು, ಈ ವಿಚಾರ ಸಂಸತ್ತಿನಲ್ಲಿ ಪ್ರಸ್ತಾಪವಾಗಿ ಪ್ರತಿಪಕ್ಷಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ರಾಜ್ಯಸಭೆ ಅಧ್ಯಕ್ಷರಾಗಿರುವ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಈ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ.

ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂಸತ್ ಸದಸ್ಯರನ್ನು ಸದನಗಳ ಕಲಾಪ ನಡೆಯುತ್ತಿರುವ ಸಂದರ್ಭದಲ್ಲೂ ಬಂಧಿಸಬಹುದು ಎಂದು ವೆಂಕಯ್ಯ ನಾಯ್ಡು ಅವರು ತಿಳಿಸಿದ್ದು, ಅಲ್ಲದೆ ಕಾನೂನು ಜಾರಿ ಸಂಸ್ಥೆಗಳು ನೀಡುವ ಸಮನ್ಸ್ ಗಳಿಂದ ಅವರು ತಪ್ಪಿಸಿಕೊಳ್ಳುವಂತಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...