ಅನಧಿಕೃತ ಮನೆ ಪಾಠ ಕೇಂದ್ರಗಳಿಗೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಮಹತ್ವದ ಸೂಚನೆ ಹೊರಡಿಸಲಾಗಿದೆ.
ಈ ರೀತಿ ಅನಧಿಕೃತವಾಗಿ ನಡೆಯುತ್ತಿರುವ ಮನೆ ಪಾಠ ಕೇಂದ್ರಗಳ (ಟ್ಯೂಷನ್) ಮೇಲೆ ಶಿಕ್ಷಣ ಕಾಯ್ದೆಯ ಅನ್ವಯ ಕ್ರಮ ಕೈಗೊಳ್ಳುವಂತೆ ಆಯುಕ್ತರು ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಅನಧಿಕೃತ ಮನೆ ಪಾಠ ಕೇಂದ್ರಗಳ ಹಾವಳಿ ತಡೆಯುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಮನವಿ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಸೂಚನೆ ಹೊರಬಿದ್ದಿದೆ.
ಆಯಾ ಜಿಲ್ಲೆಗಳ ಪ್ರಾಧಿಕಾರದ ಮುಖ್ಯಸ್ಥರಾಗಿರುವ ಉಪ ನಿರ್ದೇಶಕರು, ಕರ್ನಾಟಕ ಶಿಕ್ಷಣ ಕಾಯ್ದೆ ಅಡಿ ಇಂತಹ ಕೇಂದ್ರಗಳ ತಪಾಸಣೆ ನಡೆಸಬೇಕು ಹಾಗೂ ನೋಂದಾಯಿಸಿರದಿದ್ದರೆ ಅಂತಹ ಕೇಂದ್ರಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.