alex Certify BIG NEWS: ಅನಾರೋಗ್ಯದಿಂದ ಮುಕ್ತಿ ಹೊಂದಲು ಮಗಳಿಗೆ ದೇವದಾಸಿ ಪಟ್ಟ ಕಟ್ಟಿದ ಕುಟುಂಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅನಾರೋಗ್ಯದಿಂದ ಮುಕ್ತಿ ಹೊಂದಲು ಮಗಳಿಗೆ ದೇವದಾಸಿ ಪಟ್ಟ ಕಟ್ಟಿದ ಕುಟುಂಬ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಮುಕ್ತಿ ಹೊಂದಲೆಂದು ಹೆತ್ತ ಮಗಳಿಗೆ ದೇವದಾಸಿ ಪಟ್ಟ ಕಟ್ಟಿದ ಘಟನೆ ನಡೆದಿದೆ.

ಕೊಪ್ಪಳ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, 21 ವರ್ಷದ ಯುವತಿಗೆ ದೇವದಾಸಿ ಪಟ್ಟ ಕಟ್ಟಲಾಗಿದೆ. ಯುವತಿ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು. ಹೀಗಾಗಿ ದೇವಸ್ಥಾನಕ್ಕೆ ಕರೆದೊಯ್ದು ಯುವತಿಗೆ ದೇವದಾಸಿ ಪದ್ಧತಿಯ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ.

7 ತಿಂಗಳ ಹಿಂದೆಯೇ ಮಗಳಿಗೆ ಕುಟುಂಬದವರು ದೇವದಾಸಿ ಪಟ್ಟ ಕಟ್ಟಿದ್ದಾರೆ. ಗ್ರಾಮದ ಹಿರಿಯ ಮುಖಂಡರು ಈ ಬಗ್ಗೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಗ್ರಾಮಕ್ಕೆ ಆಗಮಿಸಿದ ಅಧಿಕಾರಿಗಳು ಮುನಿರಾಬಾದ್ ಠಾಣೆಯಲ್ಲಿ 4 ಕುಟುಂಬದ ವಿರುದ್ಧ ದೂರು ದಾಖಲಿಸಿ ಯುವತಿಯನ್ನು ರಕ್ಷಿಸಿದ್ದಾರೆ. ಸಧ್ಯ ಯುವತಿ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾಳೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...