ನವದೆಹಲಿ: ಇಡಿ ವಿಚಾರಣೆಗೆ ಹಾಜರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರ ನೆರವು ಕೇಳಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ದೆಹಲಿ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಈ ವೇಳೆ ತಮಗೆ ಅನಾರೋಗ್ಯ ಇರುವ ಹಿನ್ನೆಲೆಯಲ್ಲಿ ವಿಚಾರಣೆ ವೇಳೆ ಡಿ.ಕೆ.ಶಿವಕುಮಾರ್ ವೈದ್ಯರ ನೆರವು ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರಣೆ ವೇಳೆ ಡಿಕೆಶಿ ಸಂಬಂಧಿ, ಕುಣಿಗಲ್ ಶಾಸಕ ಡಾ.ರಂಗನಾಥ್ ಕೂಡ ಡಿ.ಕೆ.ಶಿವಕುಮಾರ್ ಗೆ ಸಾಥ್ ನೀಡಿದ್ದಾರೆ ಎಂದು ತಿಳಿದುಬಂದಿದೆ.