alex Certify BIG NEWS: ಅನಾರೋಗ್ಯ ಹಿನ್ನೆಲೆ; ED ವಿಚಾರಣೆ ವೇಳೆ ವೈದ್ಯರ ನೆರವು ಪಡೆದ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅನಾರೋಗ್ಯ ಹಿನ್ನೆಲೆ; ED ವಿಚಾರಣೆ ವೇಳೆ ವೈದ್ಯರ ನೆರವು ಪಡೆದ ಡಿ.ಕೆ. ಶಿವಕುಮಾರ್

ನವದೆಹಲಿ: ಇಡಿ ವಿಚಾರಣೆಗೆ ಹಾಜರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರ ನೆರವು ಕೇಳಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ದೆಹಲಿ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಈ ವೇಳೆ ತಮಗೆ ಅನಾರೋಗ್ಯ ಇರುವ ಹಿನ್ನೆಲೆಯಲ್ಲಿ ವಿಚಾರಣೆ ವೇಳೆ ಡಿ.ಕೆ.ಶಿವಕುಮಾರ್ ವೈದ್ಯರ ನೆರವು ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರಣೆ ವೇಳೆ ಡಿಕೆಶಿ ಸಂಬಂಧಿ, ಕುಣಿಗಲ್ ಶಾಸಕ ಡಾ.ರಂಗನಾಥ್ ಕೂಡ ಡಿ.ಕೆ.ಶಿವಕುಮಾರ್ ಗೆ ಸಾಥ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...