ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ನಾಯಕರ ಲೆಕ್ಕಾಚಾರ ಆರಂಭವಾಗಿದೆ. ಕ್ಷೇತ್ರವಾರು ಯಾವ ರೀತಿ ಮತದಾರರ ಓಲೈಕೆಗೆ ಮುಂದಾಗಬೇಕು ಎಂಬ ನಿಟ್ಟಿನಲ್ಲಿ ಆಡಳಿತಾರೂಢ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದಂತಿದೆ. ಮಂಡ್ಯದಲ್ಲಿ ಭಾವನಾತ್ಮಕ ವಿಚಾರದ ಮೇಲೆ ಮತ ಸೆಳೆಯಲು ಸಾಧ್ಯವಿಲ್ಲ ಎಂದು ಎಂ ಎಲ್ ಸಿ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿರುವ ಸಿ.ಪಿ.ಯೋಗೇಶ್ವರ್, ಮಂಡ್ಯ ಜಿಲ್ಲೆಯಲ್ಲಿ ಭಾವನಾತ್ಮಕವಾಗಿ ಮತಗಳಿಸಲು ಸಾಧ್ಯವಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡಬೇಕು. ನಮ್ಮ ಸರ್ಕಾರದ ಅವಧಿಯಲ್ಲಿ ವಿಪಕ್ಷಗಳಿಗೆ ಬಹಳ ಅನುಕೂಲವಾಗುತ್ತಿದೆ. ಅನಿವಾರ್ಯವಾಗಿ ಈ ವಿಚಾರವನ್ನು ಬಹಿರಂಗವಾಗಿ ಹೇಳುತ್ತಿದ್ದೇನೆ. ಕೆಲಸದ ಮೂಲಕ ಅಸ್ತಿತ್ವ ತೋರಿಸಿದರೆ ಹೆಚ್ಚು ಸ್ಥಾನ ಗೆಲ್ಲಬಹುದು ಎಂದು ಸಲಹೆ ನೀಡಿದ್ದಾರೆ.