alex Certify BIG NEWS: ಅನಿವಾಸಿ ಭಾರತೀಯ ಸಿರಿವಂತರ ಪಟ್ಟಿಯಲ್ಲಿ ಗೌತಮ್ ಅದಾನಿ ಸಹೋದರ ‘ನಂಬರ್ ಒನ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅನಿವಾಸಿ ಭಾರತೀಯ ಸಿರಿವಂತರ ಪಟ್ಟಿಯಲ್ಲಿ ಗೌತಮ್ ಅದಾನಿ ಸಹೋದರ ‘ನಂಬರ್ ಒನ್’

ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ, ವಿಶ್ವ ಸಿರಿವಂತರ ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದ್ದು, ಭಾರತದ ಅತಿ ಸಿರಿವಂತರ ಪಟ್ಟಿಯಲ್ಲಿ ಈವರೆಗೂ ಮೊದಲ ಸ್ಥಾನದಲ್ಲಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿದ್ದಾರೆ.

ಗೌತಮ್ ಅದಾನಿ ಭಾರತದ ಅತ್ಯಂತ ಸಿರಿವಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರೆ ಅವರ ಹಿರಿಯ ಸಹೋದರ ವಿನೋದ್ ಶಾಂತಿಲಾಲ್ ಅದಾನಿ ಅನಿವಾಸಿ ಭಾರತೀಯ ಸಿರಿವಂತರ ಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದ್ದಾರೆ.

ಹುರೂನ್ ಸಂಸ್ಥೆ ಅನಿವಾಸಿ ಭಾರತೀಯ ಸಿರಿವಂತರ ಪಟ್ಟಿ ಬಿಡುಗಡೆ ಮಾಡಿದ್ದು, 1.69 ಲಕ್ಷ ಕೋಟಿ ರೂಪಾಯಿ ಸಂಪತ್ತಿನೊಂದಿಗೆ ವಿನೋದ್ ಶಾಂತಿಲಾಲ್ ಅದಾನಿ ಮೊದಲ ಸ್ಥಾನದಲ್ಲಿದ್ದಾರೆ. ಕಳೆದ ಒಂದು ವರ್ಷದಲ್ಲಿ ಇವರ ಆಸ್ತಿ ಶೇಕಡ 28 ರಷ್ಟು ಹೆಚ್ಚಳವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...