ಬೆಂಗಳೂರು: ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿವಿಧ ರಾಜ್ಯಗಳ ಮೊರೆ ಹೋಗಿದ್ದಾರೆ.
ಅಕ್ಕಿ ವಿತರಣೆ ಮಾಡುವಂತೆ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರಿಗೆ ಮನವಿ ಮಾಡಿದ್ದಾರೆ. ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರಿಗೆ ಕರೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಅನಭಾಗ್ಯ ಯೋಜನೆಗಾಗಿ 27 ಲಕ್ಷ ಟನ್ ಅಕ್ಕಿ ಅಗತ್ಯವಿದೆ. ಅಕ್ಕಿ ಇದ್ದರೆ ಅದಕ್ಕೆ ಬೆಲೆ ಎಷ್ಟು ಎಂದು ತಿಳಿಸಿ ನಾವು ಖರೀದಿ ಮಾಡುವುದಾಗಿ ತಿಳಿಸಿದ್ದಾರೆ.
ಜುಲೈ 1ರಿಂದ ರಾಜ್ಯದ ಜನತೆಗೆ 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಬೇರೆ ಬೇರೆ ರಾಜ್ಯಗಳ ಮೊರೆ ಹೋಗಿದ್ದಾರೆ.