ಬೆಂಗಳೂರು: ನಾಳೆಯಿಂದ ರಾಜಧಾನಿ ಬೆಂಗಳೂರು ಅನ್ ಲಾಕ್ ಆಗಲಿದ್ದು, ಈ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳಿದ್ದ ಜನರು ಗುಂಟು ಮೂಟೆ ಕಟ್ಟಿಕೊಂಡು ವಾಪಸ್ ಆಗುತ್ತಿದ್ದಾರೆ. ರಾಜಧಾನಿಯತ್ತ ಜನರ ವಲಸೆ ಬೆನ್ನಲ್ಲೇ ಮತ್ತೆ ಕೊರೊನಾ ಸೋಂಕು ಹೆಚ್ಚಳವಾಗುವ ಆತಂಕ ಎದುರಾಗಿದೆ.
ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಎಲ್ಲರಿಗೂ ನಿವೇಶನ, ಮನೆ ಒದಗಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ
ಲಾಕ್ ಡೌನ್ ಘೋಷಣೆ ಬಳಿಕ ಹಳ್ಳಿಗಳಿಗೆ ತೆರಳಿದ್ದ ಜನರು, ಇದೀಗ ಲಾಕ್ ಡೌನ್ ತೆರವಾಗುತ್ತಿದ್ದಂತೆಯೇ ಮತ್ತೆ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಕುಟುಂಬ ಸಮೇತರಾಗಿ ರಾಜಧಾನಿಯತ್ತ ಜನರು ಧಾವಿಸುತ್ತಿದ್ದಾರೆ. ನಗರದಲ್ಲಿ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಿಸುವಂತೆ ಸೂಚಿಸುವುದಾಗಿ ತಿಳಿಸಿದ್ದಾರೆ.
ನಾಯಕತ್ವ ಬದಲಾವಣೆ ಬಗ್ಗೆ ಪರಿಸ್ಥಿತಿ ಆಧರಿಸಿ ಹೈಕಮಾಂಡ್ ತೀರ್ಮಾನ, ಚರ್ಚೆ ಅಪ್ರಸ್ತುತ: ಶೆಟ್ಟರ್
ಬೆಂಗಳೂರಿನತ್ತ ಜನ ವಾಪಸ್ ಆಗುತ್ತಿರುವುದರಿಂದ ಸೋಂಕಿತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಟೆಸ್ಟಿಂಗ್ ಹೆಚ್ಚಳಕ್ಕೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.