ಮಂಗಳೂರು: ವರ್ಷದ ಹಿಂದಷ್ಟೇ ಮದುವೆಯಾಗಿದ್ದ ದಂಪತಿ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಆಡು ಮರೋಳಿಯಲ್ಲಿ ನಡೆದಿದೆ.
34 ವರ್ಷದ ಮಲ್ಲಿಕಾರ್ಜುನ ಹಾಗೂ ಪತ್ನಿ ಸೌಮ್ಯ ಮೃತರು. ಮಲ್ಲಿಕಾರ್ಜುನ ಡಿಸೈನರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ವರ್ಷದ ಹಿಂದೆ ಮಲ್ಲಿಕಾರ್ಜುನ ಹಾಗೂ ಸೌಮ್ಯಾ ವಿವಾಹವಾಗಿದ್ದರು. ಆಡು ಮರೋಳಿಯ ಅಪಾರ್ಟ್ ಮೆಂಟ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಆದರೆ ಇದೀಗ ಇಬ್ಬರ ಶವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದಂಪತಿ ಸಾವಿಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮಂಗಳೂರು ಕಂಕನಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.