ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ವೇಳೆ ರಾಜಕಾಲುವೆ ಒತ್ತುವರಿಯಾದ ಬಗ್ಗೆ ಪರಿಶೀಲನೆ ನಡೆಸಿದ್ದು, ದಿವ್ಯಶ್ರೀ ಅಪಾರ್ಟ್ ಮೆಂಟ್ ಬಳಿ ಒತ್ತುವರಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ದಿವ್ಯಶ್ರೀ ಅಪಾರ್ಟ್ ಮೆಂಟ್ ನಿಂದ ರಾಜಕಾಲುವೆ ಒತ್ತುವರಿಯಾಗಿರುವ ಬಗ್ಗೆ ಗರಂ ಆದ ಡಿ.ಕೆ. ಶಿವಕುಮಾರ್, ಈ ರೀತಿಯಾದರೆ ನೀರು ಸರಾಗವಾಗಿ ಹರಿಯಲು ಹೇಗೆ ಸಾಧ್ಯ ? ತಕ್ಷಣ ಒತ್ತುವರಿ ತೆರವು ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
12 ಮೀಟರ್ ರಾಜಕಾಲುವೆ ಜಾಗದಲ್ಲಿ 7 ಮೀಟರ್ ಒತ್ತುವರಿ ಮಾಡಿಕೊಳ್ಳಲಾಗಿದೆ. ಹೀಗಿದ್ದರೆ ಮಳೆ ಬಂದಾಗ ಮತ್ತೆ ಪ್ರವಾಹ ಉಂಟಾಗುತ್ತದೆ. ಕೂಡಲೆ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು.