alex Certify BIG NEWS: ಅಪ್ಪು ಸಮಾಧಿಗೆ ಕುಟುಂಬದವರಿಂದ ಪೂಜೆ ಸಲ್ಲಿಕೆ; ಪತಿ ನೆನೆದು ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ ಪುನೀತ್‌ ರಾಜಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪ್ಪು ಸಮಾಧಿಗೆ ಕುಟುಂಬದವರಿಂದ ಪೂಜೆ ಸಲ್ಲಿಕೆ; ಪತಿ ನೆನೆದು ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ ಪುನೀತ್‌ ರಾಜಕುಮಾರ್

ಅಪ್ಪು ಗಂಧದಗುಡಿ ರಿಲೀಸ್‍ಗೆ ಕೌಂಟ್‍ಡೌನ್- ಮೊದಲ ಬಾರಿಗೆ ಅಶ್ವಿನಿ ವಿಶೇಷ ಸಂದರ್ಶನ – Public TV

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಒಂದು ವರ್ಷ. ಇಂದು ಪುನೀತ್ ರಾಜ್ ಕುಮಾರ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ ಬಳಿ ಆಗಮಿಸಿದ ಡಾ.ರಾಜ್ ಕುಟುಂಬ ಸದಸ್ಯರು ಸಮಾಧಿಗೆ ಪೂಜೆ‌ ಸಲ್ಲಿಸಿದರು.

ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿಯಿರುವ ಅಪ್ಪು ಸಮಾಧಿ ಬಳಿ ಆಗಮಿಸಿದ ನಟರಾದ ರಾಘವೇಂದ್ರ ರಾಜ್ ಕುಮಾರ್ ಹಾಗೂ ಕುಟುಂಬ, ಶಿವರಾಜ್ ಕುಮಾರ್ , ಗೀತಾ ಶಿವರಾಜ್ ಕುಮಾರ್, ಪುನೀತ್ ಸಹೋದರಿಯರು, ಹಾಗೂ ಪುನೀತ್ ಪತ್ನಿ ಅಶ್ವಿನಿ ಹಾಗೂ ಮಗಳು ಸೇರಿದಂತೆ ಕುಟುಂಬ ಸದಸ್ಯರೆಲ್ಲರೂ ಪೂಜೆ ಸಲ್ಲಿಸಿದರು.

ಈ ವೇಳೆ ಪುನೀತ್ ಪತ್ನಿ ಅಶ್ವಿನಿ ಪತಿಯನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಕುಟುಂಬದವರು ಕೆಲ ಕಾಲ ಭಾವುಕರಾದ ಘಟನೆ ನಡೆಯಿತು. ಅಪ್ಪು ಸಮಾಧಿ ಬಳಿ ಅಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿ ಸಮಾಧಿ ದರ್ಶನ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...