alex Certify BIG NEWS: ಅಪ್ರಾಪ್ತ ಬಾಲಕಿಯೊಂದಿಗೆ ಒಮ್ಮತದ ಲೈಂಗಿಕ ಕ್ರಿಯೆ ನಡೆಸಿ, ಪೋಕ್ಸೊ ಅಡಿ ಬಂಧಿತನಾಗಿದ್ದ ವ್ಯಕ್ತಿಯನ್ನು ಬಿಡುಗಡೆಗೊಳಿಸಿ ಕೋಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪ್ರಾಪ್ತ ಬಾಲಕಿಯೊಂದಿಗೆ ಒಮ್ಮತದ ಲೈಂಗಿಕ ಕ್ರಿಯೆ ನಡೆಸಿ, ಪೋಕ್ಸೊ ಅಡಿ ಬಂಧಿತನಾಗಿದ್ದ ವ್ಯಕ್ತಿಯನ್ನು ಬಿಡುಗಡೆಗೊಳಿಸಿ ಕೋಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶ

ಕೋಲ್ಕತ್ತಾ: ಸಾಕಷ್ಟು ಪ್ರಬುದ್ಧ ವ್ಯಕ್ತಿಗಳ ನಡುವಿನ ಒಮ್ಮತದ ಲೈಂಗಿಕ ಕ್ರಿಯೆಯಲ್ಲಿ ಪುರುಷನನ್ನು ಮಾತ್ರ ಆರೋಪಿ ಅಂತಾ ಪರಿಗಣಿಸಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬಂಧಿಸಲಾಗಿರುವ ವ್ಯಕ್ತಿಯನ್ನು ಬಿಡುಗಡೆಗೆ ಆದೇಶಿಸಿದೆ.

ಲೈಂಗಿಕ ಕ್ರಿಯೆಯಲ್ಲಿ ಸ್ವಯಂಪ್ರೇರಣೆಯಿಂದ ಭಾಗವಹಿಸಿದ 16 ವರ್ಷದ ಹುಡುಗಿಯು ಅದರ ಪರಿಣಾಮಗಳ ಬಗ್ಗೆ ತಿಳಿಯದಷ್ಟು ಚಿಕ್ಕವಳಲ್ಲ ಎಂದು ನ್ಯಾಯಾಲಯ ಗಮನಿಸಿದೆ. ಮಕ್ಕಳ ಸುರಕ್ಷತೆಗಾಗಿ, ಪೋಕ್ಸೊ ಕಾಯಿದೆಯ ನಿಬಂಧನೆಗಳನ್ನು ಸೂಕ್ತವಾಗಿ ಪಾಲಿಸಬೇಕು. ಇದು ಒಬ್ಬ ವ್ಯಕ್ತಿಯನ್ನು ಮದುವೆಯಾಗಲು ಒತ್ತಾಯಿಸುವುದಕ್ಕಾಗಿ ಇಂತಹ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ನ್ಯಾಯಾಲಯವು ಹೇಳಿದೆ.

ಪ್ರಕರಣದಲ್ಲಿ ಬಂಧಿಸಲಾಗಿದ್ದ 22 ವರ್ಷ ವಯಸ್ಸಿನ ಯುವಕನು 16 ವರ್ಷದ ಹುಡುಗಿಯ ಜೊತೆ ಒಮ್ಮತದ ಲೈಂಗಿಕ ಕ್ರಿಯೆ ನಡೆಸಿದ್ದ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (1) ರ ಅಡಿಯಲ್ಲಿ ಮತ್ತು ಪೋಕ್ಸೊ ಕಾಯಿದೆಯ ಸೆಕ್ಷನ್ 4 ರ ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಬ್ಬರು ಒಮ್ಮತದಿಂದ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಈತ ಕೋಲ್ಕತ್ತಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ಇದೀಗ ಪ್ರಕರಣದಲ್ಲಿ ಯುವಕನನ್ನು ಖುಲಾಸೆಗೊಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...