ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಚಾರ ವೆಚ್ಚದ ಕುರಿತಂತೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಅಭ್ಯರ್ಥಿಯ ನಗದು ವೆಚ್ಚವನ್ನು ಹತ್ತು ಸಾವಿರ ರೂಪಾಯಿಗಳಿಂದ ಎರಡು ಸಾವಿರ ರೂಪಾಯಿಗಳಿಗೆ ಇಳಿಕೆ ಮಾಡಲು ಚಿಂತನೆ ನಡೆಸಲಾಗಿದೆ.
ಚುನಾವಣಾ ವೆಚ್ಚ ಕುರಿತಂತೆ ಮತ್ತಷ್ಟು ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂಬ ಉದ್ದೇಶದಿಂದ ಈ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಕೇಂದ್ರ ಚುನಾವಣಾ ಆಯೋಗ ನಿಯಮಗಳಲ್ಲಿ ತಿದ್ದುಪಡಿ ತರುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ.
ನಗದು ಮಿತಿ 2,000 ಗಳಿಗಿಂತ ಹೆಚ್ಚಿನ ಮೊತ್ತವನ್ನು ವ್ಯಯಿಸಬೇಕಾದ ಸಂದರ್ಭದಲ್ಲಿ ಅಭ್ಯರ್ಥಿಗಳು ಚೆಕ್, ಆನ್ಲೈನ್ ಅಥವಾ ಡಿಜಿಟಲ್ ರೂಪದಲ್ಲಿ ಪಾವತಿಸಬೇಕು ಎಂದು ಚುನಾವಣಾ ಆಯೋಗ ಶಿಫಾರಸ್ಸು ಮಾಡಿದೆ. ಅಲ್ಲದೆ ಅಭ್ಯರ್ಥಿಗಳು ತಮ್ಮ ಚುನಾವಣಾ ವೆಚ್ಚಗಳನ್ನು ಬ್ಯಾಂಕ್ ಖಾತೆಯ ಮೂಲಕವೇ ನಿರ್ವಹಿಸಬೇಕಿದೆ.