ಶ್ರೀನಗರ: ಕಾಶ್ಮೀರದ ವಿವಿಧೆಡೆಗಳಲ್ಲಿ ಭಾರಿ ಮಳೆಯಿಂದಾಗಿ ಪ್ರತಿಕೂಲ ಹವಾಮಾನ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಮರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಬಾಲ್ಚಾರ್ ಹಾಗೂ ಪಹಲ್ಗಾಮ್ ಅವಳಿ ಮಾರ್ಗಗಳಲ್ಲಿ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದ ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. 80 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಅವರಲ್ಲಿ 3200 ಯಾತ್ರಾರ್ಥಿಗಳಿಗೆ ನುನ್ವಾನ್ ಪಹಲ್ಗಾಮ್ ಶಿಬಿರದಲ್ಲಿ ಹಾಗೂ 4000 ಯಾತ್ರಾರ್ಥಿಗಳಿಗೆ ಬಾಲ್ಚಾಲ್ ಬೇಸ್ ಕ್ಯಾಂಪ್ ನಲ್ಲಿ ಆಶ್ರಯ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯಾತ್ರೆ ಸ್ಥಗಿತಗೊಂಡಿರುವುದರಿಂದ ಅಮರನಾಥ ಪತ್ರ ಗುಹೆಯತ್ತ ಸಾಗಲು ಯಾತ್ರಾರ್ಥಿಗಳಿಗೆ ಅನುಮತಿ ಇರುವುದಿಲ್ಲ, ಹವಾಮಾನ ಸುಧಾರಿಸಿದ ಬಳಿಕ ಯಾತ್ರೆ ಪುನರಾರಂಭವಾಗಲಿದೆ ಎಂದು ತಿಳಿಸಿದ್ದಾರೆ.