ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಇಂದು ಹಾಗೂ ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೊದಿಯವರ ತಾಯಿ ಹೀರಾಬೆನ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಕರ್ನಾಟಕ ಭೇಟಿ ಕಾರ್ಯಕ್ರಮಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿದುಬಂದಿದೆ.
ಈ ಕುರುತು ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆಗಳು ಇಲ್ಲ. ಎಲ್ಲಾ ಕಾರ್ಯಕ್ರಮಗಳು ನಿಗದಿಪಡಿಸಿದಂತೆಯೇ ನಡೆಯುತ್ತದೆ ಎಂದು ತಿಳಿಸಿದ್ದಾರೆ.
ಇಂದು ಹಾಗೂ ನಾಳೆ ಅಮಿತ್ ಶಾ ರಾಜ್ಯ ಪ್ರವಾಸ ಮಾಡಲಿದ್ದು, ವಿಧನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಲಿದ್ದಾರೆ. ಇಂದು ಮದ್ದೂರು ಹಾಲು ಉತ್ಪಾದಕ ಕಟ್ಟಡ ಹಾಗೂ ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ಉದ್ಘಾಟಿಸಲಿದ್ದು, ಬಳಿಕ ಮಧ್ಯಾಹ್ನ 12:30ಕ್ಕೆ ಮಂಡ್ಯದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬಿ ಎಲ್ 2 ಹಾಗೂ ಬೂತ್ ಅಧ್ಯಕ್ಷರಿಗೂ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.