ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಯಡಿಯೂರಪ್ಪ ವರಿಷ್ಠರ ಭೇಟಿ ಮುಕ್ತಾಯಗೊಂಡಿದ್ದು, ರಾಜಕೀಯ ಅನಿಶ್ಚಿತತೆ, ನಾಯಕತ್ವ ಬದಲಾವಣೆ ಚರ್ಚೆಗಳಿಗೆ ತೆರೆ ಎಳೆಯುವ ಮೂಲಕ ವಿರೋಧಿ ಬಣಕ್ಕೆ ಹೈಕಮಾಂಡ್ ಅಂಗಳದಲ್ಲೇ ಖಡಕ್ ಸಂದೇಶ ರವಾನಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಹೈಕಮಾಂಡ್ ನಮ್ಮ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎಂದು ಸೂಚಿಸಿದ್ದಾರೆ ಎಂದರು.
ಮಕ್ಕಳನ್ನು ಮೊಬೈಲ್ ನಿಂದ ಹೇಗೆ ದೂರವಿಡಬೇಕು….? ಇಲ್ಲಿದೆ ಉಪಾಯ
ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ಸೇರಿದಂತೆ ಎಲ್ಲಾ ವರಿಷ್ಠರು ಕೂಡ ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಬರಬೇಕು. ರಾಜ್ಯದಲ್ಲಿ ಪಕ್ಷಕ್ಕೆ ಉತ್ತಮ ಭವಿಷ್ಯವಿದೆ. ಆ ನಿಟ್ಟಿನಲ್ಲಿ ಕೆಲಸಗಳನ್ನು ಮಾಡಿ, ನಮ್ಮೆಲ್ಲರ ಸಂಪೂರ್ಣ ಸಹಕಾರ ಬೆಂಬಲವಿರುವುದಾಗಿ ತಿಳಿಸಿದ್ದಾರೆ ಎಂದರು.
ಪಕ್ಷದ ಒಳಿತಿಗಾಗಿ, ಪಕ್ಷ ಸಂಘಟನೆ ನಿಟ್ಟಿನಲ್ಲಿ ಹಗಲಿರುಳು ಕೆಲಸ ಮಾಡುವುದಾಗಿ ತಿಳಿಸಿದ್ದೇನೆ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಭರವಸೆ ನೀಡಿದ್ದೇನೆ. ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವನ್ನು ವರಿಷ್ಠರು ವ್ಯಕ್ತಪಡಿಸಿದ್ದಾರೆ. ಇಡೀ ದೇಶದ ರಾಜಕೀಯ ಬೆಳವಣಿಗೆಗಳನ್ನು ಚರ್ಚಿಸಿದ್ದೇವೆ. ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಚರ್ಚಿಸಿದ್ದು, ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.