ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಮಂಗಳೂರು ಭಾಗದಲ್ಲಿ ಮತಬೇಟೆ ನಡೆಸಲಿದ್ದಾರೆ. ಅಮಿತ್ ಶಾ ರಾಜ್ಯ ಪ್ರವಾಸವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ತೂರು ರೋಡ್ ಶೋ ರದ್ದು ಮಾಡಿದ್ದಾರೆ. ಅಮಿತ್ ಶಾ ಅವರಿಗೆ ಕಾನೂನು ಸುವ್ಯವಸ್ಥೆ ಸಮಸ್ಯೆ ಇದೆ ಎಂದು ಹೇಳುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ಗೃಹ ಸಚಿವರಿಗೆ ರಕ್ಷಣೆ ಕೊಡಲು ಆಗುತ್ತಿಲ್ಲ. ರಾಜ್ಯಕ್ಕೆ ಬಂದ ಕೇಂದ್ರ ಗೃಹ ಸಚಿವರಿಗೆ ರಕ್ಷಣೆ ಇಲ್ಲ ಅಂದ್ರೆ ಇಲ್ಲಿನ ಜನರ ಪರಿಸ್ಥಿತಿ ಏನಿರಬಹುದು? ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾನೂನು ಇಲ್ಲದ ಸರ್ಕಾರ ಇದು. ಇಂತಹ ಸರ್ಕಾರ ಇಲ್ಲಿಗೆ ಕೊನೆಯಾಗಬೇಕು. ಜನರ ಹಿತ ಕಾಯುವಂತಹ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಆ ನಿಟ್ಟಿನಲ್ಲಿ ಜನರು ಕಾಂಗ್ರೆಸ್ ಗೆ ಮತ ನೀಡಬೇಕು ಎಂದು ಹೇಳಿದರು.