ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡಿದ್ದು ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಭೇಟಿಯಾಗಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಗಳು ವಿಪಕ್ಷಗಳಿಂದ ಕೇಳಿ ಬರುತ್ತಿರುವ ಜೊತೆಗೆ ಬಿಜೆಪಿ ಯುವ ಮುಖಂಡನ ಹತ್ಯೆ ಹಿಂದೂ ಕಾರ್ಯಕರ್ತರನ್ನು ಕೆರಳಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಹೀಗಾಗಿ ಬಿಜೆಪಿ ಕೇಂದ್ರ ನಾಯಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಾಯಿಸಿ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂಬ ವದಂತಿ ಕೇಳಿ ಬಂದಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಮುಂದುವರೆಯಲಿದ್ದಾರೆ. ವಿಪಕ್ಷಗಳ ನಾಯಕರು ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.