ಅಮೆರಿಕಾ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಈ ವೇಳೆ ಕೆಲವರು ರಾಹುಲ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಈ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಆಡಳಿತರೂಢ ಬಿಜೆಪಿ, ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜನರನ್ನು ಬೆದರಿಸುವ ಮೂಲಕ ಪ್ರಜಾಸತ್ತೆಯನ್ನು ನಾಶ ಮಾಡಲಾಗುತ್ತಿದೆ ಎಂದು ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಕಿಡಿ ಕಾರಿದ್ದಾರೆ.
ಈ ಸಂದರ್ಭದಲ್ಲಿ ಕೆಲವರು ರಾಹುಲ್ ಗಾಂಧಿಯ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಆಗ ನಗುತ್ತಲೆ ರಾಹುಲ್ ಗಾಂಧಿ ’ಭಾರತ್ ಜೋಡೋ’ ಎಂದು ಅವರತ್ತ ಕೈಬೀಸಿದ್ದಾರೆ. ಬಳಿಕ ಪ್ರತಿಭಟನಾಕಾರರನ್ನು ಸಭೆಯಿಂದ ಹೊರಹಾಕಲಾಗಿದೆ. ರಾಹುಲ್ ಗಾಂಧಿ ವಿದೇಶದಲ್ಲಿ ಭಾರತ ವಿರೋಧಿ ಧೋರಣೆ ಪ್ರದರ್ಶಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.