alex Certify BIG NEWS: ಅಮೆರಿಕಾದಲ್ಲಿ ಪೋಲಿಯೋ ವೈರಸ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಮೆರಿಕಾದಲ್ಲಿ ಪೋಲಿಯೋ ವೈರಸ್ ಪತ್ತೆ

ಕೊರೋನಾ, ಮಂಕಿ ಪಾಕ್ಸ್ ಸೇರಿದಂತೆ ಹಲವು ವೈರಸ್ ಗಳ ಕಾಟದಿಂದ ವಿಶ್ವದ ಜನತೆ ಹೈರಾಣಾಗಿದ್ದು, ಇದರ ಮಧ್ಯೆ ಈಗಾಗಲೇ ನಿರ್ಮೂಲನೆಯಾಗಿದೆ ಎಂದು ಹೇಳಲಾಗಿದ್ದ ಪೋಲಿಯೋ ವೈರಸ್ ಮತ್ತೆ ಕಾಣಿಸಿಕೊಳ್ಳುತ್ತಿದೆ.

ಪಾಕಿಸ್ತಾನದಲ್ಲಿ ಇತ್ತೀಚೆಗೆ ಪೋಲಿಯೋ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಮೆರಿಕಾದ ನ್ಯೂಯಾರ್ಕ್ ನಗರದ ರಾಕ್ಲ್ಯಾಂಡ್ ಕೌಂಟಿಯಲ್ಲಿ ಲಸಿಕೆ ಹಾಕಿಸಿಕೊಂಡಿರದ ವ್ಯಕ್ತಿಯೊಬ್ಬರಿಗೆ ಪೋಲಿಯೋ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅಲ್ಲದೆ ವಿವಿಧ ತ್ಯಾಜ್ಯ ನೀರಿನ ಏಳು ಮಾದರಿಗಳಲ್ಲಿ ಸಹ ಪೋಲಿಯೋ ವೈರಸ್ ಇರುವುದು ಪತ್ತೆಯಾಗಿದ್ದು, ಹೀಗಾಗಿ ಎಲ್ಲರೂ ತುರ್ತಾಗಿ ಲಸಿಕೆ ಹಾಕಿಸಿಕೊಳ್ಳುವಂತೆ ಅಧಿಕಾರಿಗಳು ಕರೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...