ಮುಂಬೈ: ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ ಪಿ ಎಫ್ ಐ ಸಂಘಟನೆ ಕಾರ್ಯಕರ್ತರು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ.
ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ ಪ್ಲಾನ್ ಮಾಡಿದ್ದ ಐವರು ಪಿ ಎಫ್ ಐ ಕಾರ್ಯಕರ್ತರನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಹಾರಾಷ್ಟ್ರದಲ್ಲಿ ಬಂಧಿಸಿದ್ದಾರೆ.
ಬಂಧಿತರ ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಬಯಲಾಗಿದೆ. ಬಂಧಿತ ಪಿ ಎಫ್ ಐ ಕಾರ್ಯಕರ್ತರು ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಅಲ್ಲದೇ ರಾಮಮಂದಿರ ಜಾಗದಲ್ಲಿ ಬಾಬ್ರಿ ಮಸೀದಿ ನಿರ್ಮಾಣಕ್ಕೂ ಯೋಜನೆ ರೂಪಿಸಿದ್ದರು ಎಂದು ತಿಳಿದು ಬಂದಿದೆ. ಬಂಧಿತರನ್ನು ಎನ್ ಐ ಎ ನಾಸಿಕ್ ಕೋರ್ಟ್ ಗೆ ಹಾಜರುಪಡಿಸಿದೆ.