ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪರಿಸರ ವಿಶ್ವ ವಿದ್ಯಾಲಯ ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಶಿರಸಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟು ಶಿರಸಿಯಲ್ಲಿ ಪರಿಸರ ವಿವಿ ಸ್ಥಾಪನೆ ಮಾಡುತ್ತೇವೆ ಎಂದು ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳು ಭಯಪಡುವ ಅಗತ್ಯವಿಲ್ಲ, ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಮನವಿ ಮಾದಲಾಗಿದೆ. ಅರಣ್ಯವಾಸಿಗಳ ಜೀವನಕ್ಕೆ ಯಾವುದೇ ತೊಂದರೆ ಮಾಡಲ್ಲ ಎಂದು ಭರವಸೆ ನೀಡಿದರು.