ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿದ್ಯಮಾನಗಳು ಇನ್ನೂ ಕುತೂಹಲದ ಘಟ್ಟಕ್ಕೆ ತಲುಪಿದ್ದು, ಶಾಸಕ ಅರವಿಂದ್ ಬೆಲ್ಲದ್ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿರುವ ಶಾಸಕ ಬೆಲ್ಲದ್ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಬೆನ್ನಲ್ಲೇ ಇದೀಗ ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ಜಿ.ಆರ್.ಜಿ. ರಸ್ತೆಯಲ್ಲಿರುವ ನಿವಾಸದಲ್ಲಿ ಅರುಣ್ ಸಿಂಗ್ ಭೇಟಿಯಾಗಿದ್ದು, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆಯೂ ಚರ್ಚಿಸಿದ್ದಾರೆ ಎನ್ನಲಾಗಿದೆ.
ಪಾಕಿಸ್ತಾನದಲ್ಲಿದ್ದಾನೆ ಡೊನಾಲ್ಡ್ ಟ್ರಂಪ್ ತದ್ರೂಪಿ…!
ಕಳೆದ ನಾಲ್ಕು ದಿನಗಳ ಹಿಂದಷ್ಟೇ ಸಿಎಂ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ಇಲ್ಲ, ನಾನೇ ಇನ್ನೆರಡು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ಈ ಬಗ್ಗೆ ವರಿಷ್ಠರೂ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದರು. ಸಿಎಂ ಹೇಳಿಕೆ ಬೆನ್ನಲ್ಲೇ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ದೌಡಾಯಿಸಿದ್ದು, ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿರುವುದು ಕುತೂಹಲ ಇಮ್ಮಡಿಗೊಳಿಸಿದೆ.