ನವದೆಹಲಿ: ರಾಜ್ಯ ಸಚಿವ ಸಂಪುಟ ರಚನೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಚಿವರ ಪಟ್ಟಿಗೆ ವರಿಷ್ಠರ ಅಂತಿಮ ಮುದ್ರೆ ಮಾತ್ರ ಬಾಕಿಯಿದೆ. ಈ ನಡುವೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿದ್ದಾರೆ.
ನವದೆಹಲಿಯಲ್ಲಿ ಸಿಎಂ ಬೊಮ್ಮಾಯಿ, ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದು, ಸಚಿವರ ಪಟ್ಟಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ನಡುವೆ ಬಿ.ವೈ. ವಿಜಯೇಂದ್ರ ಅವರಿಗೂ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸೆಮಿಫೈನಲ್ ನಲ್ಲಿ ಸೋತೂ ಭಾರತೀಯರ ಮನ ಗೆದ್ದ ಪುರುಷರ ಹಾಕಿ ತಂಡ
ಮಠಾಧೀಶರ ಬೆಂಬಲ ಹಿನ್ನೆಲೆಯಲ್ಲಿ ವರಿಷ್ಠರು, ವಿಜಯೇಂದ್ರ ಅವರನ್ನು ಬೊಮ್ಮಾಯಿ ಸಂಪುಟದಲ್ಲಿ ಸೇರಿಸಿಕೊಳ್ಳುವಂತೆ ಕೊನೇ ಕ್ಷಣದಲ್ಲಿ ಸೂಚನೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.