ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ. ಹೆಣ್ಣೂರು ಅಂಡರ್ ಪಾಸ್ ಬಳಿ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸೆ.20ರಂದು ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಗಂಭೀರವಾಗಿ ಗಾಯಗೊಂಡಿರುವ ಅರ್ಚಕ ಮಣಿಕಂಠ ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಟೋ ಚಾಲಕನಿಗೆ ಖುಲಾಯಿಸಿದ ಅದೃಷ್ಟ, ಲಾಟರಿಯಲ್ಲಿ ಬಂತು 12 ಕೋಟಿ ರೂ. ಬಂಪರ್ ಪ್ರೈಜ್
ಮಾಜಿ ಸಚಿವ ಆರ್. ಶಂಕರ್ ಅವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮಾಡಿಸಿ ವಾಪಸ್ ಆಗುತ್ತಿದ್ದ ವೇಳೆ ರಾತ್ರಿ 10:30ರ ಸಮಯದಲ್ಲಿ ಹೆಣ್ಣೂರು ಅಂಡರ್ ಪಾಸ್ ಬಳಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು ಅರ್ಚಕರ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಯಿಂದ ತಪ್ಪಿಸಿಕೊಂಡು ಓಡಿದರೂ ಬಿಡದ ದುಷ್ಕರ್ಮಿಗಳು ಮಚ್ಚು, ಲಾಂಗ್ ಗಳಿಂದ ದಾಳಿ ನಡೆಸಿದ್ದಾರೆ. ಅರ್ಚಕರ ಬಳಿ ಇದ್ದ 60ಗ್ರಾಂ ಚಿನ್ನದ ಸರ, 20 ಸಾವಿರ ನಗದು, ಮೊಬೈಲ್ ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಅರ್ಚಕರ ಮೇಲಿನ ಹಲ್ಲೆ ಖಂಡಿಸಿರುವ ಮಾಜಿ ಸಚಿವ ಆರ್. ಶಂಕರ್, ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.