alex Certify BIG NEWS: ಅಲ್ ಖೈದಾ ಹಿಂದೆ RSS ಕೈವಾಡ; ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಲ್ ಖೈದಾ ಹಿಂದೆ RSS ಕೈವಾಡ; ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿರುಗೇಟು

ಮೈಸೂರು: ಅಲ್ ಖೈದಾ ಹಿಂದೆ ಆರ್ ಎಸ್ ಎಸ್ ಕೈವಾಡ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನವರು ಯಾವತ್ತಾದರೂ ಬಿಜೆಪಿ ಹೊಗಳಿದ್ದಾರಾ ? ಎಂದು ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿನಿ ಮುಸ್ಕಾನ್ ಳನ್ನು ಅಲ್ ಖೈದಾ ಉಗ್ರ ಅಲ್ ಜವಾಹಿರಿ ಶ್ಲಾಘನೆ ವಿಚಾರವಾಗಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಅಲ್ ಖೈದಾ ಹೇಳಿಕೆ ಹಿಂದೆ ಆರ್ ಎಸ್ ಎಸ್ ಕೈವಾಡವಿದೆ ಎಂದು ಆರೋಪಿಸಿದ್ದರು. ಈ ವಿಚಾರವಾಗಿ ಮಾತನಾಡಿರುವ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಿದ್ದರಾಮಯ್ಯ ಆಗಲಿ, ಡಿ.ಕೆ. ಶಿವಕುಮಾರ್ ಆಗಲಿ ಯಾವತ್ತು ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ ಎಂದು ಹೇಳಿದ್ದಾರೆ? ಎಂದು ಕೇಳಿದ್ದಾರೆ.

ಹೂಡಿಕೆದಾರರಿಗೆ ಬಂಪರ್: ಷೇರು ಮಾರುಕಟ್ಟೆಯಲ್ಲಿ ಪತಂಜಲಿಯ ʼರುಚಿ ಸೋಯಾʼ ನಾಗಾಲೋಟ..!

ಹಿಜಾಬ್ ಸೇರಿದಂತೆ ಎಲ್ಲಾ ಪ್ರಕರಣಗಳನ್ನು ಕಾನೂನು ಚೌಕಟ್ಟಿನಲ್ಲಿ ಬಗೆಹರಿಸಲಾಗಿದೆ. ಸಿಎಂ ಬೊಮ್ಮಾಯಿ ಸರ್ಕಾರ ಎಲ್ಲರಿಗೂ ನ್ಯಾಯ ಕೊಡಿಸುವ ದಿಕ್ಕಿನಲ್ಲಿ ಕಠಿಣವಾದ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡಿದೆ. ಯಾರಲ್ಲೂ ಆತಂಕ ಬೇಡ. ಎಲ್ಲದಕ್ಕೂ ಉತ್ತರ ಕೊಡಲು ಬಿಜೆಪಿ ಸರ್ಕಾರ ಸಿದ್ಧವಿದೆ ಎಂದರು.

ಸರ್ಕಾರ ಎಲ್ಲರನ್ನು ಸಮಾನವಾಗಿ ತೆಗೆದುಕೊಂಡು ಹೋಗುತ್ತಿದೆ. ನಮ್ಮ ಸರ್ಕಾರಕ್ಕೆ ಯಾವುದೇ ಪ್ರಚಾರದ ಹುಚ್ಚು ಇಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...