ಬೆಂಗಳೂರು: ವಿಧಾನಸೌಧದಲ್ಲಿ ಅನಧಿಕೃತವಾಗಿ 10.5 ಲಕ್ಷ ಹಣ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದರ ಅರ್ಥ ವಿಧಾನಸೌಧದಲ್ಲೇ ಲಂಚ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮೂಗಿನ ನೇರಕ್ಕೆ ಭ್ರಷ್ಟಾಚಾರ ನಡೆಯುತ್ತಿದೆ. ಲೊಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಬಳಿ ಹಣ ಪತ್ತೆಯಾಗಿದೆ. ಅವನು ವಿಧಾನಸೌಧದಲ್ಲಿ ಯಾರಿಗೆ ಹಣ ಕೊಡಲು ತಂದಿದ್ದ? ಎಂದು ಪ್ರಶ್ನಿಸಿದ್ದಾರೆ.
ಲೋಕೋಪಯೋಗಿ ಸಚಿವರಿಗೆ ಲಂಚಕೊಡಲು ಬಂದಿರಬೇಕು. ಇಲ್ಲಾ ಮುಖ್ಯಮಂತ್ರಿಗಳಿಗೆ ಲಂಚ ಕೊಡಲು ಬಂದಿರಬೇಕು. ಈ ಬಗ್ಗೆ ಸೂಕ್ತ ತನಿಖೆ ನಡೆದು ಹಣ ತಂದಿದ್ದು ಯಾಕೆ ಎಂಬುದು ಗೊತ್ತಾಗಬೇಕು ಎಂದು ಹೇಳಿದ್ದಾರೆ.