ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ, ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಡಿ.ಕೆ.ಶಿವಕುಮಾರ್ ಅವರನ್ನು ವಿರೋಧಿಸುವ ಭರದಲ್ಲಿ ಕೋಮು ಪ್ರಚೋದನೆ ನೀಡುವಂತಹ ಪೋಸ್ಟ್ ಗಳನ್ನು ಜಾಲತಾಣಗಳಲ್ಲಿ ಪ್ರಶಾಂತ್ ಸಂಬರ್ಗಿ ಹಾಕುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾರಾಯಣಸ್ವಾಮಿ ಎಂಬುವವರು ಸೌತ್ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನಾರಾಯಣಸ್ವಾಮಿ ದೂರು ಹಿನ್ನೆಲೆಯಲ್ಲಿ ಸಂಬರ್ಗಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಉಣ್ಣೆ ಬಟ್ಟೆಗಳನ್ನು ಒಗೆಯುವಾಗ ಈ ತಪ್ಪು ಮಾಡಿದರೆ ಬೇಗ ಹಾಳಾಗುತ್ತದೆ
ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಡಿ.ಕೆ. ಶಿವಕುಮಾರ್, ಬಿಲ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನು ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ ಪ್ರಶಾಂತ್ ಸಂಬರ್ಗಿ, ದೊಡ್ಡ ದೊಡ್ಡ ಬಂಡೆಗಳನ್ನೇ ಒಡೆದು ಹಾಕಿದವರಿಗೆ anti conversion ಬಿಲ್ ಹರಿದು ಹಾಕುವುದು ಕಷ್ಟವೇನಲ್ಲ ಬಿಡಿ ಎಂದು ಬರೆದುಕೊಂಡಿದ್ದರು.