ಬೆಳಗಾವಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಅವಹೇಳನಕಾರಿಯಾಗಿ ಮಾತನಾಡುವವರಿಗೆ ಇದೊಂದು ಸಂದೇಶ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ರಾಜಕಾರಣಿಯಾಗಲಿ ಯಾರೇ ಆಗಲಿ ಅವಹೇಳನಕಾರಿಯಾಗಿ ಮಾತನಾಡುವ ಬೆಳವಣಿಗೆಗಳಿಗೆ ಕಡಿವಾಣ ಹಾಕುವ ಗಟ್ಟಿ ಸಂದೇಶ ಎಂದಿದ್ದಾರೆ.
ರಾಜಕೀಯ ಏನೇ ಇರಲಿ, ವೈಯಕ್ತಿಕ ಮಾತನಾಡಬಾರದು. ರಾಜಕೀಯ ದುರ್ನಡತೆಗೆ ಇನ್ಮುಂದೆ ಕಡಿವಾಣ ಬೀಳಬೇಕು ಎಂದು ಹೇಳಿದ್ದಾರೆ.