ಬೆಂಗಳೂರು: ಅಸಮರ್ಪಕ ಮೌಲ್ಯಮಾಪನದಿಂದಾಗಿ ಈವರೆಗೆ ರಾಜ್ಯದ 2,777 ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ಕಳೆದ ಮೂರು ವರ್ಷಗಳಿಂದ ಪಿಯುಸಿಯಲ್ಲಿ ಅಸಮರ್ಪಕ ಮೌಲ್ಯಮಾಪನದಿಂದಾಗಿ 2,777 ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಶೀಘ್ರದಲ್ಲಿಯೇ ಸಭೆ ಕರೆದು ತಪ್ಪಿತಸ್ಥರಿಗೆ ದಂಡ ವಿಧಿಸುವ ಕ್ರಮ ಕೈಗೊಳ್ಳಲಾಗುವುದು ಎಂದರು.
ಎಸಿ, ಕೂಲರ್ ಖರೀದಿ ಲೆಕ್ಕಾಚಾರದಲ್ಲಿದ್ದವರಿಗೊಂದು ಶಾಕಿಂಗ್ ಸುದ್ದಿ
2019ರಲ್ಲಿ 1072, 2020ರಲ್ಲಿ 1664 ಹಾಗೂ 2021 ರಲ್ಲಿ 39 ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿನಲ್ಲಿ ಬದಲಾವಣೆ ತರುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.