ಬೆಂಗಳೂರು: ಪಿಎಸ್ಐ, ಪಿಡಬ್ಲ್ಯುಡಿ ನೇಮಕಾತಿ ಪರೀಕ್ಷೆ ಅಕ್ರಮದ ಬಳಿಕ ಇದೀಗ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
2022 ಮಾರ್ಚ್ 14ರಂದು ನಡೆದಿದ್ದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಭೂಗೊಳಶಾಸ್ತ್ರ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎನ್ನಲಾಗಿದೆ. ಬೆಳಿಗ್ಗೆ 10 ಗಂಟೆಗೆ ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬೆಳಿಗ್ಗೆ 8:30ಕ್ಕಾಗಲೇ ಸೋರಿಕೆಯಾಗಿದ್ದು, ಮಹಿಳಾ ಅಭ್ಯರ್ಥಿಯೋರ್ವರ ವಾಟ್ಸಪ್ ಮೂಲಕ 18 ಪ್ರಶ್ನೆಗಳು ಸೋರಿಕೆಯಾಗಿವೆ. ಪರೀಕ್ಷೆಗೂ ಮೊದಲೇ ಪ್ರಶ್ನೆ ಪತ್ರಿಕೆಯಲ್ಲಿದ್ದ ಪ್ರಶ್ನೆಗಳು ಹಲವರಿಗೆ ರವಾನೆಯಾಗಿವೆ ಎಂದು ತಿಳಿದುಬಂದಿದೆ.
ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯಿಂದಲೇ ಪತಿಗೆ ಧಮ್ಕಿ
ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಕೆಎಇ ನಿರ್ದೇಶಕರು ಮಲ್ಲೇಶ್ವರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಟಿ ಆಕ್ಟ್ 66, ಐಪಿಸಿ ಸೆಕ್ಷನ್ 120b, ಐಪಿಸಿ ಸೆಕ್ಷನ್ 420, 418 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.