alex Certify BIG NEWS: ಆಂಧ್ರಪ್ರದೇಶ, ಚಂಡೀಗಢಕ್ಕೂ ಕಾಲಿಟ್ಟ ಒಮಿಕ್ರಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಂಧ್ರಪ್ರದೇಶ, ಚಂಡೀಗಢಕ್ಕೂ ಕಾಲಿಟ್ಟ ಒಮಿಕ್ರಾನ್

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಒಮಿಕ್ರಾನ್ ಸೋಂಕು ಹೆಚ್ಚುತ್ತಿದ್ದು, ಮತ್ತೆ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಆಂಧ್ರಪ್ರದೇಶ ಹಾಗೂ ಚಂಡೀಗಢದಲ್ಲಿಯೂ ರೂಪಾಂತರಿ ವೈರಸ್ ಪತ್ತೆಯಾಗಿದೆ.

ಕರ್ನಾಟಕದಲ್ಲಿ ಇಂದು ಮೂರನೇ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಚಂಡೀಗಢದಲ್ಲಿಯೂ ಮೊದಲ ಒಮಿಕ್ರಾನ್ ಕೇಸ್ ಪತ್ತೆಯಾಗಿದೆ. ಇನ್ನು ಆಂಧ್ರಪ್ರದೇಶದಲ್ಲಿಯೂ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆಯಾಗಿದ್ದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇಟಲಿಯಿಂದ ಚಂಡೀಗಢಕ್ಕೆ ಬಂದಿದ್ದ 20 ವರ್ಷದ ಯುವಕನಲ್ಲಿ ಒಮಿಕ್ರಾನ್ ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರ 17, ಕರ್ನಾಟಕ 3, ದೆಹಲಿ 2, ಗುಜರಾತ್ 3, ರಾಜಸ್ಥಾನ 9, ಚಂಡೀಗಢ 1, ಆಂಧ್ರಪ್ರದೇಶದಲ್ಲಿ 1 ಕೇಸ್ ಪತ್ತೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...