ಬೆಂಗಳೂರು: ಆಜಾನ್ ವಿರುದ್ಧ ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಭಯೋತ್ಪಾದಕರು. ಅವರನ್ನೆಲ್ಲ ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಹೇಳಿಕೆ ನೀಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಕೆ. ಹರಿಪ್ರಸಾದ್, ರಾಜ್ಯದಲ್ಲಿ ಇಂದು ಅನಗತ್ಯವಾಗಿ ಸಂಘರ್ಷಗಳನ್ನು ಸೃಷ್ಟಿ ಮಾಡಲಾಗುತ್ತಿದೆ. ಶಾಂತಿ ಕದಡುವ ಯತ್ನ ನಡೆಯುತ್ತಿದೆ. ಆಜಾನ್ ವಿರುದ್ಧ ಸುಪ್ರಭಾತ ಅಭಿಯಾನ ನಡೆಸುತ್ತಿದ್ದಾರೆ. ಇವರೆಲ್ಲ ಉಗ್ರರು. ಇಂತವರನ್ನು ಯುಎಪಿಎ(ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ) ಆಕ್ಟ್ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ಉದ್ದೇಶದಿಂದ ಇಂದು ಇಂತಹ ಸಂಘಟನೆಗಳ ಅಭಿಯಾನಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಇಂತಿಷ್ಠೆ ಡೆಸಿಬಲ್ ಸೌಂಡ್ ಇರಬೇಕು ಎಂದು ಸೂಚಿಸಿದೆ. ಅದನ್ನು ಪಾಲಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಶಬ್ದ ಮಾಲಿನ್ಯವಾದರೆ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಿ. ಅದನ್ನು ಬಿಟ್ಟು ಈ ರೀತಿ ಮಾಡುವುದು ಭಯೋತ್ಪಾದನೆ ಎಂದು ಕಿಡಿಕಾರಿದ್ದಾರೆ.