ಬೆಂಗಳೂರು: ಆಜಾನ್ ಗೆ ಪ್ರತಿಯಾಗಿ ಸುಪ್ರಭಾತ, ಹನುಮಾನ್ ಚಾಲೀಸಾ ಪಠಣೆ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಆಜಾನ್ ಹಾಗೂ ಧ್ವನಿವರ್ಧಕ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶ ಪಾಲನೆಯಾಗಬೇಕು. ಎಲ್ಲಾ ಧರ್ಮಗಳಿಗೂ ಕೋರ್ಟ್ ಆದೇಶ ಅನ್ವಯವಾಗುತ್ತದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಭಾಯಿಸುವಂತೆ ಸಲಹೆ ನೀಡಿದ್ದಾರೆ.
ಎಚ್ಚರಿಕೆ ನೀಡಲು ಬಂದ ಪೊಲೀಸರೇ ಮದುವೆಯಲ್ಲಿ ಕುಣಿದು ಕುಪ್ಪಳಿಸಿದರು
ಶಾಂತಿ ಕದಡುವ ವಾತಾವರಣ ನಿರ್ಮಾಣವಾಗಬಾರದು. ಸುಪ್ರೀಂ ಕೋರ್ಟ್ ಆದೇಶ ಕಟ್ಟುನಿಟ್ಟಾಗಿ ಜಾರಿಗೆ ಬರಬೇಕು ಎಂದು ಸೂಚಿಸಿದರು. ಧ್ವನಿರ್ವಧಕಗಳ ಬಗ್ಗೆ ಶೀಘ್ರದಲ್ಲಿಯೇ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದರು.