alex Certify BIG NEWS: ಆಟೋ ಮೇಲೆ ಬಿದ್ದ ಹೈಟೆನ್ಶನ್ ವಿದ್ಯುತ್ ವೈಯರ್; 8 ಜನರು ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಟೋ ಮೇಲೆ ಬಿದ್ದ ಹೈಟೆನ್ಶನ್ ವಿದ್ಯುತ್ ವೈಯರ್; 8 ಜನರು ಸಜೀವ ದಹನ

ಹೈದರಾಬಾದ್: ಕೂಲಿಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಆಟೋ ಮೇಲೆ ಹೈಟೆನ್ಶನ್ ವಿದ್ಯುತ್ ವೈಯರ್ ಬಿದ್ದ ಪರಿಣಾಮ 8 ಕೂಲಿ ಕಾರ್ಮಿಕರು ಸಜೀವ ದಹನಗೊಂಡಿರುವ ಘಟನೆ ಆಂಧ್ರಪ್ರದೇಶದ ಶ್ರೀಸತ್ಯಸಾಯಿ ಜಿಲ್ಲೆಯ ಚಿಲ್ಲಕೊಂಡಯ್ಯಪಲ್ಲಿಯಲ್ಲಿ ನಡೆದಿದೆ.

ವಿದ್ಯುತ್ ವೈಯರ್ ಚಲಿಸುತ್ತಿದ್ದ ಆಟೋ ಮೇಲೆ ಬಿದ್ದಿದೆ. ನೋಡ ನೋಡುತ್ತಿದ್ದಂತೆ ಆಟೋ ಧಗ ಧಗಿಸಿ ಉರಿದಿದೆ. 7 ಜನರು ಆಟೋದಲ್ಲಿಯೇ ಸಜೀವ ದಹನಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಮಹಿಳೆ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾಳೆ.

ಕಾರ್ಮಿಕರು ಕೃಷಿ ಕೆಲಸಕ್ಕಾಗಿ ಚಿಲ್ಲಕೊಂಡಯ್ಯಪಲ್ಲಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ. ಆಟೋದಲ್ಲಿ ಒಟ್ಟು 10 ಜನರು ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...