ಬೆಂಗಳೂರು: ಪರಸ್ಪರ ಕಚ್ಚಾಡುತ್ತಿರುವ ರಾಜ್ಯ ಬಿಜೆಪಿ ನಾಯಕರ ಕಿವಿಹಿಂಡಿ ಬುದ್ದಿ ಹೇಳಬೇಕಾದ ಹೈಕಮಾಂಡ್ ತೆರೆಮರೆಯಲ್ಲಿ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ. ಬಿಜೆಪಿ ಹೈಕಮಾಂಡ್‌ಗೆ ಬೇಕಾಗಿರುವುದು ಸರ್ಕಾರದ ಸುಭದ್ರತೆಯೇ? ಮುಖ್ಯಮಂತ್ರಿಗಳ ಅಭದ್ರತೆಯೇ? ಎಂಬುದನ್ನು ನಿರ್ಧಾರ ಮಾಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಬಿಜೆಪಿಯೊಳಗಿನ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದು ಅರಾಜಕತೆ ಸೃಷ್ಟಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ
ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಮತ್ತೆ ಸಿಎಂ ಆಗುವ ಅಭಿಲಾಷೆ ವ್ಯಕ್ತಪಡಿಸಿದ ಹೆಚ್.ಡಿ. ಕುಮಾರಸ್ವಾಮಿ
ಕೊರೊನಾ ನಿಯಂತ್ರಿಸಲು ಮೇಲುಸ್ತುವಾರಿ ನೋಡಿಕೊಳ್ಳಬೇಕಿದ್ದ ಸಚಿವರು ತಮ್ಮ ಕಚೇರಿಗಳತ್ತ ಮುಖಮಾಡುತ್ತಿಲ್ಲ, ಕ್ಷೇತ್ರಗಳ ಜನರ ಸಂಕಷ್ಟಕ್ಕೂ ಸ್ಪಂದಿಸುತ್ತಿಲ್ಲ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ಕಳೆದ ಎರಡು ದಿನಗಳಿಂದ ವಿಧಾನಸೌಧವೇ ಕೆಕೆ ಗೆಸ್ಟ್ ಹೌಸ್ ಗೆ ಹಾಗೂ ಬಿಜೆಪಿ ಕಚೇರಿಗೆ ಸ್ಥಳಾಂತರಗೊಂಡಂತಿದೆ. ಜನರ ಕಷ್ಟ ಆಲಿಸುವವರೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವರು, ಶಾಸಕರನ್ನು ವಿಶ್ವಾಸಕ್ಕೆ ಪಡೆದು ಒಗ್ಗಟ್ಟಿನಿಂದ ಪ್ರಸಕ್ತ ವೈದ್ಯಕೀಯ ತುರ್ತುಪರಿಸ್ಥಿತಿಯನ್ನು ಎದುರಿಸಿ ಜನತೆಯ ಹಿತಕಾಪಾಡಲು ಮುಂದಾಗಬೇಕಾಗಿದ್ದ ಸಿಎಂ ಯಡಿಯೂರಪ್ಪ, ಶಾಸಕರು-ಸಚಿವರು ಮತ್ತು ಪಕ್ಷದ ಹೈಕಮಾಂಡ್ ನಾಯಕರ ಕೈಕಾಲು ಹಿಡಿದು ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ ಎಂದು ಕಿಡಿಕಾರಿದರು.