ಹಳೆ ಹುಬ್ಬಳ್ಳಿಯಲ್ಲಿ ಇದೇ ತಿಂಗಳ 14 ರಂದು ಪೊಲೀಸ್ ಠಾಣೆ ಮುಂದೆ ಗಲಭೆ ನಡೆದಿದ್ದು, ಈಗಾಗಲೇ ಹಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಯುವಕನೊಬ್ಬ ಹಾಕಿದ ಪೋಸ್ಟ್ ಸಂಬಂಧ ಆತನ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಸ್ಲಿಮರು ಹಳೆ ಹುಬ್ಬಳ್ಳಿ ಠಾಣೆ ಎದುರು ಜಮಾಯಿಸಿದಾಗ ಈ ಗಲಭೆ ನಡೆದಿತ್ತು.
ಇದೀಗ ಪ್ರಕರಣದ ಆರೋಪಿಯೊಬ್ಬ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮಹಮ್ಮದ್ ಆರೀಫ್ ಆತ್ಮಹತ್ಯೆಗೆ ಯತ್ನಿಸಿದ್ದು, ಹಳೆ ಹುಬ್ಬಳ್ಳಿ ಠಾಣೆಯಲ್ಲಿ ಟರ್ಪಟೈನ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಆತನ ಜೊತೆಗಿದ್ದ ಮತ್ತೊಬ್ಬ ಆರೋಪಿ ಈತನನ್ನು ರಕ್ಷಿಸಿದ್ದು, ಇದೀಗ ಮಹಮ್ಮದ್ ಆರೀಫ್ ನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.