ಕಾರವಾರ: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾಸರಗೋಡ ಬಳಿಯ ಇಕೋ ಬೀಚ್ ಬಳಿ ನಡೆದಿದೆ.
ರಾಮ ನಾಗೇಶ್ (32) ಆತ್ಮಹತ್ಯೆ ಮಾಡಿಕೊಂಡ ಕಾನ್ಸ್ ಟೇಬಲ್. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಮ ನಾಗೇಶ್, ಜೂಜು, ಆನ್ ಲೈನ್ ಆಟದಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಕಳೆದ ಐದಾರು ತಿಂಗಳಿಂದ ಕರ್ತವ್ಯಕ್ಕೂ ಗೈರಾಗಿದ್ದರು. ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.