ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಸವೇಶ್ವರ ನಗರದ ಮನೆಯಲ್ಲಿ ನಡೆದಿದೆ.
26 ವರ್ಷದ ಸ್ವಾತಿ ಆತ್ಮಹತ್ಯೆಗೆ ಶರಣಾದ ಮಹಿಳೆ. ಸ್ವಾತಿ ಗ್ಲೋಬಲ್ ವಿಲೇಜ್ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
2 ವರ್ಷದ ಹಿಂದೆ ದಾಮೋದರ್ ಎಂಬುವವರ ಜೊತೆ ಸ್ವಾತಿ ವಿವಾಹವಾಗಿದ್ದರು. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬಸವೇಶ್ವರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.