ಬೆಳಗಾವಿ: ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.
49 ವರ್ಷದ ರಾಮಲಿಂಗ ನಾಯಕ್ ಆತ್ಮಹತ್ಯೆ ಮಾಡಿಕೊಂಡ ಎಎಸ್ಐ. ರಾಮಲಿಂಗ ನಾಯಕ್ ಅಥಣಿಯ ಪೊಲಿಸ್ ಠಾಣೆಯಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಈಗ ಏಕಾಏಕಿ ನೇಣಿಗೆ ಕೊರಳೊಡ್ಡಿದ್ದಾರೆ. ಅಥಣಿಯ ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಎಎಸ್ಐ ಶವ ಪತ್ತೆಯಾಗಿದೆ. ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾರೂಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.