alex Certify BIG NEWS: ಆತ್ಮೀಯ ಸ್ನೇಹಿತನ ಅಗಲಿಕೆ ನೋವು ತಂದಿದೆ; ಆರ್.ಧ್ರುವನಾರಾಯಣ ನಿಧನಕ್ಕೆ ಸಿಎಂ ಬೊಮ್ಮಾಯಿ ಕಂಬನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆತ್ಮೀಯ ಸ್ನೇಹಿತನ ಅಗಲಿಕೆ ನೋವು ತಂದಿದೆ; ಆರ್.ಧ್ರುವನಾರಾಯಣ ನಿಧನಕ್ಕೆ ಸಿಎಂ ಬೊಮ್ಮಾಯಿ ಕಂಬನಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನನ್ನ ಆತ್ಮೀಯ ಸ್ನೇಹಿತರಾಗಿದ್ದವರು. ಅವರ ಹಠಾತ್ ನಿಧನ ಆಘಾತ ತಂದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಧ್ರುವನಾರಾಯಣ ವಿಪಕ್ಷದಲ್ಲಿದ್ದರೂ ಕೂಡ ನನ್ನ ಆತ್ಮೀಯರಾಗಿದ್ದರು. ರಾಜ್ಯದ ಅಭಿವೃದ್ಧಿಯ ಬಗ್ಗೆ ಸಾಕಷ್ಟು ಬಾರಿ ಚರ್ಚೆ ನಡೆಸಿದ್ದು. ಸಂಸತ್ತಿನಲ್ಲಿ ಅವರು ಮಾಡಿದ ಭಾಷಣ ಸ್ಪೂರ್ತಿದಾಯಕವಾಗಿತ್ತು. ದ್ರುವನಾರಾಯಣ ಅಗಲಿಕೆ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಧ್ರುವನಾರಾಯಣ ಅವರ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...