ಶಾಲೆಯಲ್ಲಿ ಹಿಜಾಬ್ ಧರಿಸುವ ಕುರಿತಂತೆ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತೀರ್ಪು ಇಂದು ಸುಪ್ರೀಂ ಕೋರ್ಟ್ ನಿಂದ ಹೊರ ಬಿದ್ದಿದೆ.
ಇಬ್ಬರೂ ನ್ಯಾಯಮೂರ್ತಿಗಳು ಸಹ ವಿಭಿನ್ನ ತೀರ್ಪು ನೀಡಿದ್ದು, ನ್ಯಾಯಮೂರ್ತಿ ಹೇಮಂತ್ ಗುಪ್ತಾ, ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ವಜಾಗೊಳಿಸಿದ್ದರೆ, ನ್ಯಾಯಮೂರ್ತಿ ಹಿಮಾಂಶು, ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದ್ದಾರೆ.
ಹೀಗಾಗಿ ಪ್ರಕರಣ ಸದ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಬಂದಿದ್ದು, ಇದರ ಮಧ್ಯೆ ಬಳ್ಳಾರಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತೀರ್ಪಿನ ಪ್ರತಿ ಇನ್ನೂ ನನ್ನ ಕೈ ಸೇರಿಲ್ಲ. ಅದು ಬಂದು ಬಳಿಕ ಪರಿಶೀಲಿಸುತ್ತೇನೆ ಎಂದು ಹೇಳಿದ್ದಾರೆ.