alex Certify BIG NEWS: ಆನಂದ್ ಸಿಂಗ್ ಭೇಟಿಗೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದ KPCC ಅಧ್ಯಕ್ಷ; ಹಾಗಾದ್ರೆ ಭೇಟಿಯಾಗಿದ್ದೇಕೆ…? ಡಿ.ಕೆ.ಶಿವಕುಮಾರ್ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆನಂದ್ ಸಿಂಗ್ ಭೇಟಿಗೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದ KPCC ಅಧ್ಯಕ್ಷ; ಹಾಗಾದ್ರೆ ಭೇಟಿಯಾಗಿದ್ದೇಕೆ…? ಡಿ.ಕೆ.ಶಿವಕುಮಾರ್ ಹೇಳಿದ್ದೇನು…?

ಬೆಂಗಳೂರು: ಸಚಿವ ಆನಂದ್ ಸಿಂಗ್ ಭೇಟಿಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ, ತುಂಗಾ ಆರತಿ ರೀತಿ ಕಾವೇರಿ ಆರತಿ ಬಗ್ಗೆ ಚರ್ಚಿಸಿದ್ದೇವೆ ಅಷ್ಟೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಆನಂದ್ ಸಿಂಗ್ ಭೇಟಿ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ಮೇಕೆದಾಟು ಸಂಗಮದಲ್ಲಿ ಕಾವೇರಿ ಆರತಿ ಬಗ್ಗೆ ಚರ್ಚೆ ನಡೆಸಿದೆವು. ನನ್ನ ಕ್ಷೇತ್ರದಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ಇದೆ. ಈ ಬಗ್ಗೆ ಮಾತನಾಡಿದ್ದೇವೆ ಎಂದು ಹೇಳಿದರು.

ಆನಂದ್ ಸಿಂಗ್ ಭೇಟಿಗೆ ಯಾವುದೇ ರಾಜಕೀಯ ಸಂಬಂಧವಿಲ್ಲ. ರಾಜಕೀಯ ಮಾಡೋದಿದ್ರೆ ಯಾವುದೋ ರೆಸಾರ್ಟ್ ನಲ್ಲಿ ಮಾಡ್ತೇವೆ. ನೇರವಾಗಿ ಮನೆಗೆ ಬಂದು ರಾಜಕೀಯ ಮಾತಾಡಲ್ಲ ಎಂದು ಹೇಳಿದರು.

ರಾಜಕೀಯ ಉದ್ದೇಶಕ್ಕೆ ಭೇಟಿಯಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳುತ್ತಿದ್ದರೂ ಬಿಜೆಪಿ ಕೆಲ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಹಂಚಿಕೆ ವಿಚಾರದಲ್ಲಿಯೂ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಇದೀಗ ಏಕಾಏಕಿ ತಮ್ಮ ಖಾಸಗಿ ಕಾರಿನಲ್ಲಿ ಡಿ.ಕೆ. ಶಿವಕುಮಾರ್ ಮನೆಗೆ ತೆರಳಿ ಅವರನ್ನು ಭೇಟಿಯಾಗಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...