alex Certify BIG NEWS: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಇಂದು ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಹೊರಬೀಳಲಿದೆ.

ಮಹಾರಾಷ್ಟ್ರದ ಅಂಧೇರಿ ವೆಸ್ಟ್, ಬಿಹಾರದ ಮೂಕಾಮ್ ಹಾಗೂ ಗೋಪಾಲ್ ಗಂಜ್, ಹರಿಯಾಣದ ಆದಂಪುರ, ತೆಲಂಗಾಣದ ಮೂನು ಗೂಡ, ಉತ್ತರ ಪ್ರದೇಶದ ಗೋಲ ಗೋರಕ್ನಾಥ್ ಮತ್ತು ಒಡಿಸ್ಸಾದ ಧಾಮ್ನಗರ್ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಅಕ್ಟೋಬರ್ 7ರಂದು ಗೆಜೆಟ್ ನೋಟಿಫಿಕೇಶನ್ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 14 ಅಂತಿಮ ದಿನಾಂಕವಾಗಿದೆ. ಅಕ್ಟೋಬರ್ 15ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 17 ಕೊನೆಯ ದಿನಾಂಕವಾಗಿದೆ.

ನವೆಂಬರ್ 3ರ ಗುರುವಾರದಂದು ಉಪಚುನಾವಣೆಗೆ ಮತದಾನ ನಡೆಯಲಿದ್ದು, ನವೆಂಬರ್ 6ರ ಭಾನುವಾರ ಮತ ಎಣಿಕೆ ಕಾರ್ಯ ನಡೆಯಲಿದೆ. ಬಹುತೇಕ ಅದೇ ದಿನ ಫಲಿತಾಂಶ ಹೊರ ಬೀಳಲಿದೆ.

— ANI (@ANI) October 3, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...