alex Certify BIG NEWS: ಆರು ವರ್ಷಗಳ ಬಳಿಕ ಮತ್ತೆ ಬೌಲಿಂಗ್ ಮಾಡಿದ ವಿರಾಟ್….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆರು ವರ್ಷಗಳ ಬಳಿಕ ಮತ್ತೆ ಬೌಲಿಂಗ್ ಮಾಡಿದ ವಿರಾಟ್….!

ಕಳೆದ ಕೆಲವು ದಿನಗಳಿಂದ ಫಾರ್ಮ್ ಕಳೆದುಕೊಂಡಿದ್ದ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಮತ್ತೆ ಲಯಕ್ಕೆ ಬರುತ್ತಿದ್ದಾರೆ. ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಕೊಹ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಇದರ ಮಧ್ಯೆ ಬುಧವಾರದಂದು ನಡೆದ ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. 2016ರ ಬಳಿಕ ಟಿ ಟ್ವೆಂಟಿ ಪಂದ್ಯದಲ್ಲಿ ಕೊಹ್ಲಿ ಇದೇ ಮೊದಲ ಬಾರಿಗೆ ಬೌಲಿಂಗ್ ಮಾಡಿದ್ದಾರೆ.

17ನೇ ಓವರ್ ನಲ್ಲಿ ಬೌಲಿಂಗ್ ಮಾಡಲು ಮುಂದಾದ ವಿರಾಟ್ ಕೊಹ್ಲಿ ಆರು ರನ್ ನೀಡಿದ್ದಾರೆ. ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ 25.2 ಓವರ್ಗಳನ್ನು ಬೌಲ್ ಮಾಡಿದ್ದು, ಒಟ್ಟು 204 ರನ್ ನೀಡಿ ನಾಲ್ಕು ವಿಕೆಟ್ ಪಡೆದಿದ್ದಾರೆ.

ಬುಧವಾರ ನಡೆದ ಪಂದ್ಯದಲ್ಲಿ ಹಾಂಕಾಂಗ್ ವಿರುದ್ಧ ಭಾರತ 40 ರನ್ ಅಂತರದಿಂದ ಗೆಲುವು ದಾಖಲಿಸಿದ್ದು, ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಸೂಪರ್ 4 ಹಂತ ಪ್ರವೇಶಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...