alex Certify BIG NEWS: ಆರೋಗ್ಯ ಇಲಾಖೆಯಲ್ಲಿ ಮಹತ್ವದ ಬದಲಾವಣೆ; ಹಾಜರಾತಿ ಆಧರಿಸಿ ವೇತನ ಪಾವತಿ ವ್ಯವಸ್ಥೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆರೋಗ್ಯ ಇಲಾಖೆಯಲ್ಲಿ ಮಹತ್ವದ ಬದಲಾವಣೆ; ಹಾಜರಾತಿ ಆಧರಿಸಿ ವೇತನ ಪಾವತಿ ವ್ಯವಸ್ಥೆ ಜಾರಿ

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಆಸ್ಪತ್ರೆ, ಇಲಾಖೆ ಕಚೇರಿ ಮತ್ತು ಸಂಸ್ಥೆಗಳಲ್ಲಿ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಗೈರಾಗುವ ಬಗ್ಗೆ ಸಾರ್ವಜನಿಕರು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಾರಣಗಳಿಲ್ಲದೆ ಕೆಲಸ ಕದಿಯುವುದನ್ನು ಸಹಿಸಲು ಆಗುವುದಿಲ್ಲ. ಅವರ ಕರ್ತವ್ಯ ಲೋಪದಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗುತ್ತಿದ್ದು, ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದ ಸಿಬ್ಬಂದಿ, ವೈದ್ಯರ ವೇತನ ಕಡಿತಕ್ಕೆ ಸೂಚನೆ ನೀಡಲಾಗಿದೆ. ಇಲಾಖೆ ಅಡಿಯಲ್ಲಿ ಬರುವ ಎಲ್ಲ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೂ ಅವರ “ಆಧಾರ್‌ “ ಆಧರಿತ ಬಯೋಮೆಟ್ರಿಕ್‌ ಹಾಜರಾತಿ (ಎಇಬಿಎಎಸ್‌) ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ಕಟ್ಟಡಗಳಲ್ಲಿ ಬಳಸುವಂತಿಲ್ಲ ಎಸಿ, ಈ ದೇಶದಲ್ಲಿ ಜಾರಿಯಾಗಿದೆ ಹೊಸ ನಿಯಮ….!

ಕೋವಿಡ್‌ ಕಾರಣಕ್ಕೆ ಸ್ಥಗಿತಗೊಂಡಿದ್ದ ಬಯೋಮೆಟ್ರಿಕ್‌ ಹಾಜರಾತಿ ಪದ್ಧತಿಯನ್ನು ಕಳೆದ ಎರಡು ತಿಂಗಳ ಹಿಂದಿನಿಂದಲೇ ಮತ್ತೆ ಕಡ್ಡಾಯಗೊಳಿಸಲಾಗಿದೆ. ಅನೇಕ ಸಭೆಗಳಲ್ಲಿ ಮತ್ತು ಸುತ್ತೋಲೆ ಮೂಲಕವೂ ಈ ಬಗ್ಗೆ ಸೂಚನೆ ನೀಡಲಾಗಿದೆ. ಆದರೂ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಹಾಜರಾತಿ ದಾಖಲಿಸಲಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗ ಸ್ಪಷ್ಟ ಎಚ್ಚರಿಕೆ ಜತೆಗೆ ಅಧಿಕೃತ ಆದೇಶ ನೀಡಿದ್ದು ಅಂತಹ ಪ್ರಕರಣಗಳನ್ನು ಗೈರು ಹಾಜರಿ ಎಂದು ಪರಿಗಣಿಸಿ ವೇತನ ಕಡಿತಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇಲಾಖೆಯ ಆಸ್ಪತ್ರೆ, ಸಂಸ್ಥೆ ಮತ್ತು ಕೇಂದ್ರಗಳ ಜವಾಬ್ದಾರಿ ನಿರ್ವಹಿಸುವ ಡಿಡಿಒ ( ಸ್ಯಾಲರಿ ಡ್ರಾಯಿಂಗ್‌ ಆಫೀಸರ್‌)ಗಳು ಪ್ರತೀ ತಿಂಗಳು ಎಇಬಿಎಎಸ್‌ ನಲ್ಲಿ ತಮ್ಮ ವ್ಯಾಪ್ತಿಯ ಎಲ್ಲ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ ಅದರ ಅನುಸಾರವೇ ವೇತನ ಪಾವತಿಗೆ ವರದಿ ಸಿದ್ಧಪಡಿಸಬೇಕು. ಶೇ.80ರಷ್ಟು ಹಾಜರಾತಿಗಿಂತ ಕಡಿಮೆ ಇದ್ದಲ್ಲಿ ಅವರ ವೇತನ ತಡೆ ಹಿಡಿಯಲಾಗುತ್ತದೆ. ಶೇ.80ಕ್ಕಿಂತ ಹಾಜರಾತಿ ಕಡಿಮೆ ಇದ್ದಲ್ಲಿ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಲಾಗುತ್ತದೆ. ಸಿಬ್ಬಂದಿ ನೀಡುವ ಕಾರಣ ನಿಜವಾಗಿದ್ದಲ್ಲಿ ಪ್ರಕರಣ ಮುಕ್ತಾಯಗೊಳಿಸಲಾಗುವುದು. ಒಂದು ವೇಳೆ ಸಬೂಬು ನೀಡಿದರೆ ಅಥವಾ ನೀಡಿರುವ ಮಾಹಿತಿ ಸುಳ್ಳು ಆಗಿದ್ದಲ್ಲಿ ಮುಂದಿನ ತಿಂಗಳ ವೇತನದಲ್ಲಿ ನಿರ್ದಿಷ್ಟಪಡಿಸಿರುವ ಮೊತ್ತವನ್ನು ಕಡಿತಗೊಳಿಸಲಾಗುವುದು ಎಂದು ವಿವರಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...