alex Certify BIG NEWS: ಆರೋಗ್ಯ ಸಚಿವರ ವಿರುದ್ಧ HDK ಹಿಗ್ಗಾ ಮುಗ್ಗಾ ವಾಗ್ದಾಳಿ; ತುಮಕೂರು ಘಟನೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆರೋಗ್ಯ ಸಚಿವರ ವಿರುದ್ಧ HDK ಹಿಗ್ಗಾ ಮುಗ್ಗಾ ವಾಗ್ದಾಳಿ; ತುಮಕೂರು ಘಟನೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಆಗ್ರಹ

ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆ ನಿರ್ಲಕ್ಷಕ್ಕೆ ತಾಯಿ ಹಾಗೂ ಅವಳಿ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಸುಧಾಕರ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಧಾಕರ್ ಅವರೇ ಸಾವು, ಕ್ರೌರ್ಯವನ್ನೇ ಸಂಭ್ರಮಿಸುವ ʼಸಾವುಗೇಡಿ ಸರಕಾರʼದ ಆಡಳಿತದಲ್ಲಿ ಸರಕಾರಿ ಆಸ್ಪತ್ರೆಗಳನ್ನು ಸಾವಿನಕೂಪಗಳನ್ನಾಗಿ ಪರಿವರ್ತನೆ ಮಾಡಿದ ಕೀರ್ತಿ ನಿಮ್ಮದು. ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ 3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೆಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ವೈಫಲ್ಯಗಳನ್ನು ಸಮರ್ಥಿಸಿಕೊಳ್ಳುತ್ತಿದ್ದೀರಿ ಎಂದರೆ; ಆ ಬಾಣಂತಿ, ಆಕೆಯ ಎರಡು ನವಜಾತ ಶಿಶುಗಳ ಧಾರುಣ ಸಾವನ್ನೂ ಸಂಭ್ರಮಿಸುತ್ತಿದ್ದೀರಿ ಎಂದೇ ಅರ್ಥ. ನಿಮ್ಮ ವಿಕೃತ ಮನಃಸ್ಥಿತಿಗೆ ನನ್ನ ಧಿಕ್ಕಾರವಿದೆ. ಮನುಷತ್ವ ಇದಿಯೇ ಎಂದು ಕಿಡಿಕಾರಿದ್ದಾರೆ.

ತುಮಕೂರು ಆಸ್ಪತ್ರೆಯಲ್ಲಿ ನಡೆದದ್ದೇನು? ಆ ವೈದ್ಯೆ & ಸಿಬ್ಬಂದಿಯ ನಿರ್ದಯ, ಕ್ರೌರ್ಯದ ವರ್ತನೆ, ಆಕೆಯನ್ನು ಆಸ್ಪತ್ರೆಗೆ ಕರೆತಂದ ಮಹಿಳೆಗೆ ಈಗ ಪೊಲೀಸರಿಂದ ಬೆದರಿಕೆ ಹಾಕಿಸುತ್ತಿರುವ ಬಗ್ಗೆ ನನಗೆ ಮಾಹಿತಿ ಇದೆ. ಅಧಿಕಾರ ಇದೆ ಎಂದು ಏನು ಬೇಕಾದರೂ ಮಾಡಬಹುದಾ? ಇನ್ನು ಆರೇ ತಿಂಗಳು, ನಿಮ್ಮ ಅಧಿಕಾರದ ಅಮಲು ಇಳಿಯುತ್ತದೆ. ಇಂಥ ಧಾರುಣ ಸಾವುಗಳಾದ ಮೇಲೆಯಾದರೂ ಹದಗೆಟ್ಟ ವ್ಯವಸ್ಥೆಯನ್ನು ಸರಿಪಡಿಸುವ ಬದಲು ಅದನ್ನೇ ಸಮರ್ಥಿಸಿಕೊಳ್ಳುವುದು ಎಂದರೆ ವಿಕಾರವಲ್ಲದೆ ಮತ್ತೇನು? ಜಿಲ್ಲಾಸ್ಪತ್ರೆಯಲ್ಲೇ ಇಂಥ ದುಃಸ್ಥಿತಿ ಇದ್ದರೆ ತಾಲೂಕು, ಅದಕ್ಕೂ ಕೆಳಹಂತದ ಆರೋಗ್ಯ ಕೇಂದ್ರಗಳ ಪಾಡೇನು? ಹೇಳಿ ಸಚಿವರೇ?

ಆಸ್ಪತ್ರೆಯಿಂದ ನಿರ್ದಯವಾಗಿ ಹೊರಹಾಕಲ್ಪಟ್ಟ ಆ ತಾಯಿ, ನಾಲ್ಕು ಗೋಡೆಗಳ ನಡುವೆ ಇಡೀ ರಾತ್ರಿಯೆಲ್ಲಾ ನರಳಿ ಜೀವ ಚೆಲ್ಲಿದ್ದಾರೆ. ಜನಿಸಿದ ಕ್ಷಣದಲ್ಲೇ ಉಸಿರುಬಿಟ್ಟ ಆ ಎರಡು ಕಂದಮ್ಮಗಳ ಮರಣ ನಿಮ್ಮ ಆತಃಕರಣವನ್ನು ಕಲಕಿಲ್ಲವೇ ಸಚಿವರೇ? ಕರ್ನಾಟಕ ಕಂಡ ಅತ್ಯಂತ ಕರಾಳ ಕ್ರೌರ್ಯವಿದು. ಅದನ್ನು ನಾನು ಪ್ರಶ್ನಿಸಿದ್ದೇ ತಪ್ಪಾ? ನನ್ನ ಸರಕಾರವಿದ್ದಾಗ ಚಾಮರಾಜನಗರದ ಸುಳವಾಡಿಯ ದೇಗುಲದಲ್ಲಿ ನಡೆದ ವಿಷಪ್ರಸಾದ ಪ್ರಕರಣಕ್ಕೂ ಇದಕ್ಕೂ ಸಂಬಂಧವೇನು? ಆ ಘಟನೆ ನಡೆದಾಗ ನಾನು ಚೆನ್ನೈನಲ್ಲಿ ಅಧಿಕೃತ ಪ್ರವಾಸದಲ್ಲಿದ್ದೆ. ವಿಷಯ ಗೊತ್ತಾದ ಕೂಡಲೇ ಹಿಂದಿರುಗಿ ಸ್ಥಳಕ್ಕೆ ಭೇಟಿ ನೀಡಿದ್ದೆ. ಅದಕ್ಕೂ ಇದಕ್ಕೂ ಸಂಬಂಧವೇನು? ಅಲ್ಲಿ ನಡೆದಿದ್ದು ಷಡ್ಯಂತ್ರ, ಇಲ್ಲಿ ನಡೆದದ್ದು ಕ್ರೌರ್ಯ. ಅದೇ ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್‌ ದುರಂತದಿಂದ 36 ಜನರ ಸಾವಿಗೆ ಕಾರಣರಾಗಿದ್ದು ಯಾರು? ನಿಮ್ಮ ವೈಫಲ್ಯವಲ್ಲವೇ? ರಾಜ್ಯದ ಉದ್ದಗಲಕ್ಕೂ ನಡೆದ ಸಾವುಗಳ ರಣಕೇಕೆ ನಿಮ್ಮ ಕಿವಿಗೆ ಇಂಪಾಗಿತ್ತಾ? ಎಂದು ಪ್ರಶ್ನಿಸಿದ್ದಾರೆ

ತುಮಕೂರು ಘಟನೆಗೆ ನೈತಿಕ ಹೊಣೆ ಹೊತ್ತು ಸಚಿವ ಸುಧಾಕರ್ ರಾಜೀನಾಮೆ ನೀಡಲೇಬೇಕು. ಆ ನೈತಿಕತೆ ನಿಮಗೆ ಇಲ್ಲದಿದ್ದರೆ, ಅದನ್ನು ಕೊನೆಪಕ್ಷ ನಿಮ್ಮ ಮುಖ್ಯಮಂತ್ರಿ ಬೊಮ್ಮಾಯಿ ಅವರಾದರೂ ಪ್ರದರ್ಶಿಸಬೇಕು. ನಿಮ್ಮನ್ನು ಸಂಪುಟದಿಂದ ಕಿತ್ತೊಗೆಯಲೇಬೇಕು. ನಿಮ್ಮ ಪಕ್ಷಕ್ಕೂ ಅಂಥ ನೈತಿಕತೆ ರಾಜ್ಯ ಸರಕಾರಕ್ಕೆ ಇದೆಯಾ? ಎಂದು ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...